ಶ್ರೀರಾಮನವಮಿ
ಇತಿಹಾಸ
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನ್ಮವಾಯಿತು.
ಶ್ರೀರಾಮನವಮಿಯ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ
ದೇವತೆಗಳು ಮತ್ತು ಅವತಾರಗಳ ಜನ್ಮತಿಥಿಯಂದು ಭೂಮಿಯ ಮೇಲೆ ಅವರ ತತ್ತ್ವವು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಶ್ರೀರಾಮ ನವಮಿಗೆ ಶ್ರೀರಾಮತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶ್ರೀರಾಮ ನವಮಿಗೆ ‘ಶ್ರೀರಾಮ ಜಯ ರಾಮ ಜಯ ಜಯ ರಾಮ|’ ನಾಮಜಪ, ಹಾಗೆಯೇ ಶ್ರೀರಾಮನ ಇತರ ಉಪಾಸನೆಗಳನ್ನು ಭಾವಪೂರ್ಣವಾಗಿ ಮಾಡುವುದರಿಂದ ಶ್ರೀರಾಮತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆಯಲು ಸಹಾಯವಾಗುತ್ತದೆ.
ಶ್ರೀರಾಮನವಮಿಯನ್ನು ಆಚರಿಸುವ ಪದ್ಧತಿ
ಅನೇಕ ರಾಮ ಮಂದಿರಗಳಲ್ಲಿ ಚೈತ್ರ ಶುಕ್ಲ ಪ್ರತಿಪದೆಯಿಂದ ಒಂಭತ್ತು ದಿನಗಳ ಕಾಲ ಈ ಉತ್ಸವವು ನಡೆಯುತ್ತದೆ. ರಾಮಾಯಣದ ಪಾರಾಯಣ, ಹರಿಕಥೆ ಮತ್ತು ರಾಮನ ಮೂರ್ತಿಗೆ ವಿವಿಧ ಶೃಂಗಾರ ಮುಂತಾದವುಗಳೊಂದಿಗೆ ಈ ಉತ್ಸವವನ್ನು ಆಚರಿಸುತ್ತಾರೆ. ನವಮಿಯಂದು ಮಧ್ಯಾಹ್ನ ರಾಮಜನ್ಮದ ಕೀರ್ತನೆ (ಹರಿಕಥೆ) ಯಾಗುತ್ತದೆ. ಮಧ್ಯಾಹ್ನ ಕುಂಚಿಗೆ (ಮಗುವಿನ ತಲೆಗೆ ಕಟ್ಟುವ ಒಂದು ವಸ್ತ್ರ. ಈ ವಸ್ತ್ರವು ಬೆನ್ನಿನವರೆಗೆ ಇರುತ್ತದೆ.) ಹಾಕಿದ ತೆಂಗಿನಕಾಯಿಯನ್ನು ತೊಟ್ಟಿಲಿನಲ್ಲಿಟ್ಟು ತೂಗುತ್ತಾರೆ. ಭಕ್ತರು ಅದರ ಮೇಲೆ, ಗುಲಾಲು ಮತ್ತು ಹೂವುಗಳನ್ನು ಅರ್ಪಿಸುತ್ತಾರೆ.’ (ಕೆಲವು ಕಡೆಗಳಲ್ಲಿ ತೆಂಗಿನ ಕಾಯಿಯ ಬದಲು ಶ್ರೀರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿ ಇಡುತ್ತಾರೆ. – ಸಂಕಲನಕಾರರು) ಈ ಸಂದರ್ಭದಲ್ಲಿ ಶ್ರೀರಾಮನ ಜನ್ಮದ ಗೀತೆಯನ್ನು ಹೇಳಲಾಗುತ್ತದೆ. ಅದರ ನಂತರ ಶ್ರೀರಾಮನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಪ್ರಸಾದವೆಂದು ಶುಂಠಿಚೂರ್ಣವನ್ನು ಕೊಡುತ್ತಾರೆ. ಕೆಲವು ಕಡೆಗಳಲ್ಲಿ ಶುಂಠಿಚೂರ್ಣದೊಂದಿಗೆ ಮಹಾಪ್ರಸಾದವನ್ನೂ ನೀಡುತ್ತಾರೆ.
ಶ್ರೀರಾಮನವಮಿಯ ಮಹತ್ವ
ತ್ರೇತಾಯುಗದಲ್ಲಿ ರಾಮನ ಜನ್ಮವಾದಾಗ ಕಾರ್ಯನಿರತವಾಗಿದ್ದ ಶ್ರೀವಿಷ್ಣುವಿನ ಸಂಕಲ್ಪ, ತ್ರೇತಾಯುಗದಲ್ಲಿನ ಅಯೋಧ್ಯಾವಾಸಿಗಳ ಭಕ್ತಿ ಭಾವ ಮತ್ತು ಪೃಥ್ವಿಯಲ್ಲಿನ ಸಾತ್ತ್ವಿಕ ವಾತಾವರಣದಿಂದಾಗಿ ಪ್ರಭು ಶ್ರೀರಾಮನ ಜನ್ಮದಿಂದ ಶೇ. ೧೦೦ ರಷ್ಟು ಪರಿಣಾಮವಾಗಿತ್ತು. ಅನಂತರ ಪ್ರತಿವರ್ಷ ಬರುವಂತಹ ಚೈತ್ರ ಶುಕ್ಲ ನವಮಿಗೆ ಬ್ರಹ್ಮಾಂಡದಲ್ಲಿನ ವಾತಾವರಣದಲ್ಲಿ ರಾಮತತ್ತ್ವವು ಪ್ರಕ್ಷೇಪಿಸಿ ವಾತಾವರಣವನ್ನು ಸಾತ್ತ್ವಿಕ ಮತ್ತು ಚೈತನ್ಯಮಯವನ್ನಾಗಿಸಲು ವಿಷ್ಣುಲೋಕದಿಂದ ಶ್ರೀರಾಮತತ್ತ್ವಯುಕ್ತ ವಿಷ್ಣುತತ್ತ್ವವು ಭೂಲೋಕದ ದಿಕ್ಕಿನತ್ತ ಪ್ರಕ್ಷೇಪಿತವಾಗುತ್ತದೆ ಮತ್ತು ಆ ದಿನ ಶ್ರೀರಾಮನ ಅಂಶಾತ್ಮಕ ಜನ್ಮವಾಗುತ್ತದೆ. ಇದರ ಪರಿಣಾಮ ಇಡೀ ವರ್ಷವಿದ್ದು ಬ್ರಹ್ಮಾಂಡದಲ್ಲಿ ರಾಮ ತತ್ತ್ವಯುಕ್ತ ಸಾತ್ತ್ವಿಕತೆ ಮತ್ತು ಚೈತನ್ಯದ ಪ್ರಕ್ಷೇಪಣೆಯಾಗುತ್ತದೆ. ರಾಮ ತತ್ತ್ವಯುಕ್ತ ಸಾತ್ತ್ವಿಕತೆ ಮತ್ತು ಚೈತನ್ಯವನ್ನು ಬ್ರಹ್ಮಾಂಡದಲ್ಲಿನ ಪ್ರತಿಯೊಂದು ಸಜೀವ ಮತ್ತು ನಿರ್ಜೀವ ವಸ್ತುಗಳು ಗ್ರಹಿಸಿಕೊಳ್ಳುತ್ತವೆ ಮತ್ತು ಅದರಿಂದ ಅವುಗಳಿಗೆ ತಮ್ಮ ಕಾರ್ಯವನ್ನು ಒಳ್ಳೆಯ ರೀತಿಯಿಂದ ಮಾಡಲು ಸಾಧ್ಯವಾಗುತ್ತದೆ.
ಶ್ರೀರಾಮನವಮಿಯ ಮಹತ್ವ
ತ್ರೇತಾಯುಗದಲ್ಲಿ ರಾಮನ ಜನ್ಮವಾದಾಗ ಕಾರ್ಯನಿರತವಾಗಿದ್ದ ಶ್ರೀವಿಷ್ಣುವಿನ ಸಂಕಲ್ಪ, ತ್ರೇತಾಯುಗದಲ್ಲಿನ ಅಯೋಧ್ಯಾವಾಸಿಗಳ ಭಕ್ತಿ ಭಾವ ಮತ್ತು ಪೃಥ್ವಿಯಲ್ಲಿನ ಸಾತ್ತ್ವಿಕ ವಾತಾವರಣದಿಂದಾಗಿ ಪ್ರಭು ಶ್ರೀರಾಮನ ಜನ್ಮದಿಂದ ಶೇ. ೧೦೦ ರಷ್ಟು ಪರಿಣಾಮವಾಗಿತ್ತು. ಅನಂತರ ಪ್ರತಿವರ್ಷ ಬರುವಂತಹ ಚೈತ್ರ ಶುಕ್ಲ ನವಮಿಗೆ ಬ್ರಹ್ಮಾಂಡದಲ್ಲಿನ ವಾತಾವರಣದಲ್ಲಿ ರಾಮತತ್ತ್ವವು ಪ್ರಕ್ಷೇಪಿಸಿ ವಾತಾವರಣವನ್ನು ಸಾತ್ತ್ವಿಕ ಮತ್ತು ಚೈತನ್ಯಮಯವನ್ನಾಗಿಸಲು ವಿಷ್ಣುಲೋಕದಿಂದ ಶ್ರೀರಾಮತತ್ತ್ವಯುಕ್ತ ವಿಷ್ಣುತತ್ತ್ವವು ಭೂಲೋಕದ ದಿಕ್ಕಿನತ್ತ ಪ್ರಕ್ಷೇಪಿತವಾಗುತ್ತದೆ ಮತ್ತು ಆ ದಿನ ಶ್ರೀರಾಮನ ಅಂಶಾತ್ಮಕ ಜನ್ಮವಾಗುತ್ತದೆ. ಇದರ ಪರಿಣಾಮ ಇಡೀ ವರ್ಷವಿದ್ದು ಬ್ರಹ್ಮಾಂಡದಲ್ಲಿ ರಾಮ ತತ್ತ್ವಯುಕ್ತ ಸಾತ್ತ್ವಿಕತೆ ಮತ್ತು ಚೈತನ್ಯದ ಪ್ರಕ್ಷೇಪಣೆಯಾಗುತ್ತದೆ. ರಾಮ ತತ್ತ್ವಯುಕ್ತ ಸಾತ್ತ್ವಿಕತೆ ಮತ್ತು ಚೈತನ್ಯವನ್ನು ಬ್ರಹ್ಮಾಂಡದಲ್ಲಿನ ಪ್ರತಿಯೊಂದು ಸಜೀವ ಮತ್ತು ನಿರ್ಜೀವ ವಸ್ತುಗಳು ಗ್ರಹಿಸಿಕೊಳ್ಳುತ್ತವೆ ಮತ್ತು ಅದರಿಂದ ಅವುಗಳಿಗೆ ತಮ್ಮ ಕಾರ್ಯವನ್ನು ಒಳ್ಳೆಯ ರೀತಿಯಿಂದ ಮಾಡಲು ಸಾಧ್ಯವಾಗುತ್ತದೆ.
ರಾಮಭಕ್ತರ ಮಹತ್ವ
ಶ್ರೀರಾಮನಂತೂ ಶ್ರೇಷ್ಠ ಮತ್ತು ಪೂಜನೀಯನಾಗಿದ್ದನು, ಅಲ್ಲದೆ ಅವನ ಭಕ್ತರೂ ಅಷ್ಟೇ ವಂದನೀಯರಾಗಿದ್ದರು. ಕಲಿಯುಗದಲ್ಲಿ ಶ್ರೀರಾಮನು ಪುನಃ ಅವತಾರ ತಾಳಬಹುದು. ಆದರೆ ಶ್ರೀರಾಮನ ಸೀಮಾತೀತ ಭಕ್ತಿಯನ್ನು ಮಾಡುವಂತಹ ಉಚ್ಚ ಮಟ್ಟದ ಭಕ್ತರು ಸಿಗುವುದು ಕಠಿಣವಾಗಿದೆ. ಸಾಧಕರು ಶ್ರೀರಾಮನ ಭಕ್ತರ ಗುಣಗಳನ್ನು ಅಂಗೀಕರಿಸಿ ಅದಕ್ಕನುಸಾರ ಸಾಧನೆ ಮಾಡಿದರೆ ಅವರ ಮೇಲೆ ಗುರುರೂಪೀ ಶ್ರೀರಾಮನ ಕೃಪೆಯಾಗಿ ಅವರಿಗೆ ಅಂತರ್ಬಾಹ್ಯ ಕ್ಷಾತ್ರಧರ್ಮ ಹೋರಾಟವನ್ನು ಯಶಸ್ವಿಯಾಗಿ ನಡೆಸಲು ಆಗುವುದು ಮತ್ತು ಅವರಲ್ಲಿ ಅಂತರ್ಬಾಹ್ಯ ರಾಮರಾಜ್ಯವು ಖಂಡಿತವಾಗಿಯೂ ಸ್ಥಾಪನೆಯಾಗುವುದು. – ಈಶ್ವರ (ಕು.ಮಧುರಾ ಭೋಸಲೆಯವರ ಮಾಧ್ಯಮದಿಂದ, ೬.೪.೨೦೦೫, ರಾತ್ರಿ ೯.೦೩ ರಿಂದ ೯.೨೦)
ರಾಮಾಯಣದ ಉತ್ಪತ್ತಿ
ಉತ್ಪತ್ತಿ ಮತ್ತು ಅರ್ಥ:
ರಾಮಾಯಣ ಶಬ್ದವು ರಂ + ಅಯನ ಈ ಎರಡು ಶಬ್ದಗಳಿಂದ ನಿರ್ಮಾಣವಾಗಿದೆ. ರಮ್ ರಮಯತೇ ಎಂದರೆ ತಲ್ಲೀನರಾಗುವುದು, ‘ಸಾಧನೆಯಲ್ಲಿ ತಲ್ಲೀನರಾಗುವುದು’. ಅಯನ ಎಂದರೆ ಸಪ್ತಲೋಕಗಳು. ಸಾಧನೆಯಲ್ಲಿ ತಲ್ಲೀನರಾಗಿ ಆನಂದದಲ್ಲಿದ್ದು, ಸಪ್ತಲೋಕ ಗಳನ್ನು ದಾಟಿ ಮೋಕ್ಷಕ್ಕೆ ಹೋಗುವುದನ್ನು ರಾಮಾಯಣದಲ್ಲಿ ಹೇಳಲಾಗಿದೆ. ‘ಸಮಸ್ತ ಅಯನಂ ರಾಮಾಯಣಮ್|’ ಅಯನ ಎಂದರೆ ಹೋಗುವುದು, ಮಾರ್ಗ ಇತ್ಯಾದಿ ಅರ್ಥವಾಗುತ್ತದೆ. ಪರಬ್ರಹ್ಮ ಪರಮಾತ್ಮಸ್ವರೂಪನಾದ ಶ್ರೀರಾಮನ ಕಡೆಗೆ ಕೊಂಡೊಯ್ಯುವ, ಅದರತ್ತ ಹೋಗಲು ಚಾಲನೆ ನೀಡುವ ಅಥವಾ ಸ್ಫೂರ್ತಿ, ಉತ್ಸಾಹ ನೀಡುವ, ಜೀವನದ ನಿಜವಾದ ಮಾರ್ಗವನ್ನು ತೋರಿಸುವುದೆಂದರೆ ‘ರಾಮಾಯಣ’ವಾಗಿದೆ.
ರಾಮಾಯಣದಲ್ಲಿನ ಕೆಲವು ವಿಶೇಷ ಪ್ರಸಂಗಗಳು
ಶ್ರೀರಾಮನಲ್ಲಿ ವಿರಾಟನ ಸಾಮರ್ಥ್ಯವಿತ್ತು!
ಶೂರ್ಪಣಖಿಯು ಅವಳ ಸಹೋದರ ಖರ ಮತ್ತು ದೂಷಣ ಹಾಗೂ ೧೦ಸಾವಿರ ಸೈನ್ಯದೊಂದಿಗೆ ಬಂದಾಗ ರಾಮನು ಲಕ್ಷ್ಮಣನಿಗೆ, ‘ನೀನು ಸೀತೆಯನ್ನು ನೋಡಿಕೋ! ಈ ಸೈನ್ಯವನ್ನು ಸೋಲಿಸಲು ನಾನೊಬ್ಬನೇ ಸಾಕು’ ಎಂದು ಹೇಳಿದನು. ಇದರಿಂದ ರಾಮನ ಶೌರ್ಯದ ಕಲ್ಪನೆ ಬರುತ್ತದೆ. ಇಲ್ಲಿ ರಾಮನ ಮನಸ್ಸಿನ ವೈಶಾಲ್ಯವು ತಿಳಿಯುತ್ತದೆ. ರಾಮನ ಮನಸ್ಸು ವಿಶ್ವವ್ಯಾಪಕವಾಗಿತ್ತು. ಅವನು ವಿರಾಟನ (ಈಶ್ವರನ) ಅಂಶವಾಗಿದ್ದನು. ಈಶ್ವರನ ಸಾಮರ್ಥ್ಯವು ಅವನಲ್ಲಿ ಬಂದಿತ್ತು. ಪೃಥ್ವಿ ಮತ್ತು ಪೃಥ್ವಿಯ ಮೇಲಿನ ಸೈನ್ಯವು ಅವನಿಗೆ ನಗಣ್ಯವಾಗಿತ್ತು.
ಪ್ರತಿಯೊಬ್ಬರೂ ಲಕ್ಷ್ಮಣರಾಗಬೇಕು!
ಲಕ್ಷ್ಮಣನು ವನವಾಸದಲ್ಲಿದ್ದಾಗ ರಾಮ ಮತ್ತು ಸೀತೆಯರ ಹಿಂದಿನಿಂದ ಹೋಗುತ್ತಿದ್ದನು. ಲಕ್ಷ್ಮಣನಿಗೆ ರಾಮನ ಬಗ್ಗೆ ಬಹಳ ಪ್ರೇಮವಿತ್ತು. ರಾಮನು ಯಾವಾಗಲೂ ತನ್ನ ಎದುರು ಇರಬೇಕೆಂದು ಅನಿಸುತ್ತಿತ್ತು. ಲಕ್ಷ್ಮಣನು ಯಾವಾಗಲೂ ರಾಮನಾಮವನ್ನು ಜಪಿಸುತ್ತಿದ್ದನು, ಅವನು ರಾಮನನ್ನು ಭಜಿಸುತ್ತಿದ್ದನು. ಇಂತಹ ಈ ಭಕ್ತನು ಮಾಯೆಯ, ಅಂದರೆ ಸೀತೆಯ ಮುಖವನ್ನು ಯಾವತ್ತೂ ನೋಡಲಿಲ್ಲ. ಅವನು ಅವಳ ಪದಕಮಲಗಳ ಕಡೆಗೆ ನೋಡಿ ನಡೆಯುತ್ತಿದ್ದನು. ಅದರಿಂದ ಲಕ್ಷ್ಮಣನ ಮೇಲಿನ ಮಾಯೆಯ ಹಿಡಿತವು ಕಡಿಮೆಯಾಯಿತು ಮತ್ತು ‘ಸೀತಾ-ರಾಮ-ಲಕ್ಷ್ಮಣ’ ಈ ಶಬ್ದವು ನಿರ್ಮಾಣವಾಯಿತು.
ರಾಮಭಕ್ತಿಯ ಸಾಮರ್ಥ್ಯ
ಒಮ್ಮೆ ಅಂಗದನು ರಾಮನ ದೂತನಾಗಿ ರಾವಣನ ರಾಜ್ಯಸಭೆಗೆ ಹೋದನು, ಆಗ ರಾವಣನು ತನ್ನ ಪ್ರಶಂಸೆಯನ್ನು ಮಾಡಿಕೊಂಡು ಅವನನ್ನು ಹೆದರಿಸಿದನು. ಆಗ ಅಂಗದನು ‘ಎಲೈ ರಾವಣನೇ, ಇಲ್ಲಿಯವರೆಗೆ ನಾನು ನಿನ್ನ ಶೌರ್ಯದ ಬಗ್ಗೆ ಕೇಳಿದೆ. ಈಗ ನಾನು ನನ್ನ ಕಾಲನ್ನು ಭೂಮಿಯ ಮೇಲೆ ಇಡುತ್ತೇನೆ, ನೀನು ಅಥವಾ ನಿನ್ನ ಸೈನಿಕರು ಅದನ್ನು ಎತ್ತಿ ತೋರಿಸಬೇಕು ಅಂದರೆ ನಾನು ನಿನ್ನ ಮಾತುಗಳನ್ನು ನಿಜವೆಂದು ನಂಬುತ್ತೇನೆ’ ಎಂದನು. ಅಂಗದನು ‘ಜೈ ಶ್ರೀರಾಮ’ ಎಂದು ತನ್ನ ಕಾಲನ್ನು ಭೂಮಿಯ ಮೇಲೆ ಇಟ್ಟನು. ಆಶ್ಚರ್ಯದ ಸಂಗತಿಯೆಂದರೆ ರಾವಣ ಅಥವಾ ಅವನ ಎಲ್ಲ ಸೈನಿಕರಿಂದ ಅಂಗದನ ಕಾಲನ್ನು ಅಲುಗಾಡಿಸಲೂ ಆಗಲಿಲ್ಲ. ಇದೇ ರಾಮಭಕ್ತಿಯ ಪರಿಣಾಮವಾಗಿದೆ!
ರಕ್ಷಾಬಂಧನ (ರಾಖಿ ಹುಣ್ಣಿಮೆ)
ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2024 ರಲ್ಲಿ ರಕ್ಷಾಬಂಧನವನ್ನು ಸೋಮವಾರ, ಅಗಸ್ಟ್ 19 ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ.
ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ರಕ್ಷಾಬಂಧನದಿಂದ ಸಹೋದರ-ಸಹೋದರಿಯರ ನಡುವೆ ಪ್ರೀತಿ ಹೆಚ್ಚಾಗುವುದರೊಂದಿಗೆ ಅವರ ನಡುವೆ ಇರುವ ಕೊಡ-ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ. ಈ ಹಬ್ಬವು ಇಬ್ಬರಿಗೂ ಈಶ್ವರನತ್ತ ಪ್ರಯಾಣಿಸುವ ಅವಕಾಶ ಒದಗಿಸುತ್ತದೆ.
ಇವನ್ನು ಮಾಡಿ
- ಸಹೋದರನು ಸಹೋದರಿಯ ಮನೆಗೆ ಹೋಗಬೇಕು.
- ಸಹೋದರಿಯು ಸಹೋದರನ ಆರತಿ ಬೆಳಗಿ, ನಿರಪೇಕ್ಷವಾಗಿ ರಾಖಿ ಕಟ್ಟಬೇಕು
- ಸಹೋದರಿಯು ಸಹೋದರನಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಬೇಕು
ಈ ದಿನವು ಸಹೋದರ-ಸಹೋದರಿಯರ ನಡುವಿನ ಕೊಡ-ಕೊಳ್ಳುವಿಕೆಯ ಲೆಕ್ಕಾಚಾರ ಕಡಿಮೆ ಮಾಡಲು ಪೂರಕವಾಗಿರುತ್ತದೆ. ಸಹೋದರಿಯು ನಿಸ್ವಾರ್ಥವಾಗಿ ರಾಖಿಯನ್ನು ಕಟ್ಟಿದರೆ ಈ ಲೆಕ್ಕಾಚಾರ ಇನ್ನಷ್ಟು ವೇಗವಾಗಿ ಕಡಿಮೆಯಾಗುತ್ತದೆ. - ಸಹೋದರನು ಸಹೋದರಿಗೆ ಸಾತ್ತ್ವಿಕ ಉಡುಗೊರೆಯನ್ನು ನೀಡಬೇಕು
ರಕ್ಷಾಬಂಧನದಂದು ರಾಖಿ ಕಟ್ಟಿಸಿಕೊಂಡು ಸಹೋದರನು ಸಹೋದರಿಗೆ ಏನಾದರೂ ಉಡುಗೊರೆ ನೀಡುತ್ತಾನೆ. ಇದರಿಂದ ಇಬ್ಬರಿಗೂ ಪರಸ್ಪರರ ನೆನಪಾಗುತ್ತದೆ. ಸಹೋದರಿಯ ಪ್ರೀತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ಆದರೆ ಪ್ರೀತಿಯ ಸಂಕೇತವೆಂದು ಉಡುಗೊರೆ ನೀಡಿ ಸ್ವಲ್ಪ ಮಟ್ಟಿಗೆ ಸಹೋದರಿಗೆ ಆನಂದ ನೀಡಬಹುದು. ಉಡುಗೊರೆ ಕೊಡುವಾಗ, ಸಹೋದರನ ಮನಸ್ಸಿನಲ್ಲಿರುವ ಈಶ್ವರನ ಬಗ್ಗೆ ಇರುವ ಭಾವವು ಸಹೋದರಿಯ ಮೇಲೆಯೂ ಪರಿಣಾಮ ಬೀರುತ್ತದೆ. ಆದುದರಿಂದ ಸಹೋದರಿಯು ಉಡುಗೊರೆಯನ್ನು ಕೇಳಿ ಪಡೆದುಕೊಳ್ಳದೆ, ಸಹೋದರನು ಸ್ವೇಚ್ಛೆಯಿಂದ ನೀಡಿರುವುದನ್ನು ಸ್ವೀಕರಿಸಿದರೆ ಒಳ್ಳೆಯದಾಗುತ್ತದೆ.
ಸಾತ್ತ್ವಿಕ ವಸ್ತುಗಳಿಂದ ಜೀವದ ಮೇಲೆ ವ್ಯಾವಹಾರಿಕ ಪರಿಣಾಮವಾಗುವುದಿಲ್ಲ. ಸಾತ್ತ್ವಿಕ ವಸ್ತುಗಳು ಕೊಡುವ ಜೀವಕ್ಕೆ 20% ಮತ್ತು ಸ್ವೀಕರಿಸುವ ಜೀವಕ್ಕೆ 18% ಲಾಭವಾಗುತ್ತದೆ. ಸಾತ್ತ್ವಿಕ ಕೃತಿಗಳಿಂದ ಕೊಡ-ಕೊಳ್ಳುವ ಲೆಕ್ಕ ಕಡಿಮೆಯಾಗಿ, ಹೊಸ ಲೆಕ್ಕಾಚಾರ ನಿರ್ಮಾಣವಾಗುವುದಿಲ್ಲ. - ಪ್ರಾರ್ಥನೆ ಮಾಡಿ
ಏನ ಬದ್ಧೋ ಬಲೀ ರಾಜಾ ದಾನವೇಂದ್ರೋ ಮಹಾಬಲಃ|
ತೇನ ತ್ವಾಮಪಿ ಬಧ್ನಾಮಿ ರಕ್ಷೇ ಮಾ ಚಲ ಮಾ ಚಲ||
ಅರ್ಥ : ಮಹಾಬಲಿ ಮತ್ತು ದಾನವೇಂದ್ರನಾದ ಬಲಿರಾಜನು ಯಾವುದರಿಂದ ಬದ್ಧನಾದನೋ, ಆ ರಾಖಿಯಿಂದ ನಾನು ನಿನ್ನನ್ನೂ ಕಟ್ಟುತ್ತೇನೆ. ಎಲೈ ರಾಖಿಯೇ, ನೀನು ವಿಚಲಿತಳಾಗಬೇಡ.
ಸಹೋದರಿಯು ಸಹೋದರನ ಕಲ್ಯಾಣಕ್ಕಾಗಿ ಮತ್ತು ಸಹೋದರನು ಸಹೋದರಿಯ ರಕ್ಷಣೆಗಾಗಿ ಪ್ರಾರ್ಥನೆಯನ್ನು ಮಾಡುವುದರೊಂದಿಗೆ ಇಬ್ಬರೂ ‘ರಾಷ್ಟ್ರ ಮತ್ತು ಧರ್ಮರಕ್ಷಣೆಗಾಗಿ ನಮ್ಮಿಂದ ಪ್ರಯತ್ನವಾಗಲಿ’, ಎಂದು ಈಶ್ವರನಲ್ಲಿ ಪ್ರಾರ್ಥನೆಯನ್ನು ಮಾಡಬೇಕು.
ಇವನ್ನು ಮಾಡಬೇಡಿ
- ಸಹೋದರನಿಗೆ ಅಸಾತ್ತ್ವಿಕ ಅಥವಾ ದೇವತೆಗಳ ಚಿತ್ರವಿರುವ ರಾಖಿ ಕಟ್ಟಬೇಡಿ
ಇತ್ತೀಚೆಗೆ ರಾಖಿಯ ಮೇಲೆ ಓಂ ಅಥವಾ ದೇವತೆಗಳ ಚಿತ್ರಗಳಿರುತ್ತವೆ. ರಾಖಿಯನ್ನು ಉಪಯೋಗಿಸಿದ ನಂತರ ಅದು ಆಚೀಚೆ ಬಿದ್ದು ದೇವತೆಗಳ ಅಥವಾ ಧರ್ಮಪ್ರತೀಕಗಳ ವಿಡಂಬನೆಯಾಗುತ್ತದೆ. ಇದರಿಂದ ಪಾಪ ತಗಲುತ್ತದೆ. ಇದನ್ನು ತಡೆಗಟ್ಟಲು ರಾಖಿಯನ್ನು ನೀರಿನಲ್ಲಿ ವಿಸರ್ಜಿಸಬೇಕು. ಅದೇ ರೀತಿ ಅಸಾತ್ತ್ವಿಕ ನಕ್ಷೆಯಿರುವ ರಾಖಿಗಳನ್ನೂ ಉಪಯೋಗಿಸಬೇಡಿ. - ಸಹೋದರಿಯು ‘ತನಗೆ ಇದು ಬೇಕು, ಅದು ಕೊಡಿಸಬೇಕು’ ಎಂಬ ಅಪೇಕ್ಷೆ ಇಟ್ಟುಕೊಳ್ಳಬಾರದು
ಇತ್ತೀಚೆಗೆ ಸಹೋದರಿಯರು ರಾಖಿ ಕಟ್ಟಿಸಿಕೊಂಡ ಮೇಲೆ ಇದನ್ನೇ ಕೊಡಬೇಕು ಎಂದು ಮೊದಲೇ ಸಹೋದರನಿಗೆ ತಿಳಿಸಿರುತ್ತಾರೆ. ಈ ರೀತಿ ಸಹೋದರಿಯು ತನ್ನ ಸಹೋದರನಿಂದ ಯಾವುದಾದರೊಂದು ವಸ್ತುವನ್ನು ಪಡೆಯುವ ಅಪೇಕ್ಷೆಯನ್ನು ಇಟ್ಟುಕೊಂಡರೆ, ಆ ದಿನ ಪ್ರಾಪ್ತವಾಗುವ ಆಧ್ಯಾತ್ಮಿಕ ಲಾಭದಿಂದ ವಂಚಿತಳಾಗುತ್ತಾಳೆ. ಮಾತ್ರವಲ್ಲ, ಅಪೇಕ್ಷೆ ಇಟ್ಟುಕೊಂಡು ವಸ್ತು ಪಡೆದರೆ ಅದರಿಂದ 3 ಪಟ್ಟು ಹೆಚ್ಚು ಕೊಡ-ಕೊಳ್ಳುವ ಲೆಕ್ಕ ನಿರ್ಮಾಣವಾಗುತ್ತದೆ. ಈ ದಿನದಂದು ವಾತಾವರಣದಲ್ಲಿರುವ ಪ್ರೇಮ ಮತ್ತು ಆನಂದದ ಲಹರಿಗಳನ್ನು ಅನುಭವಿಸಲು ಆ ಅಪೇಕ್ಷೆ ಅಡ್ಡ ಬರು್ತದೆ. ಆಧ್ಯಾತ್ಮಿಕ ದೃಷ್ಟಿಯಲ್ಲಿ ಕೊಡುಕೊಳ್ಳುವ ಲೆಕ್ಕವನ್ನು ಕಡಿಮೆ ಮಾಡಲು ಈ ದಿನವು ಮಹತ್ವದ್ದಾಗಿದೆ. - ಅಶುಭ ಅಥವಾ ಭದ್ರಾಕಾಲದಲ್ಲಿ ರಾಖಿ ಕಟ್ಟಬೇಡಿ
ಶನಿಯಂತೆಯೇ ಶನಿಯ ಸಹೋದರಿಯಾದ ಭದ್ರೆಯ ದೃಷ್ಟಿಯಿಂದ ಹಾನಿಯುಂಟಾಗುತ್ತದೆ. ಭದ್ರೆಯ ಕುದೃಷ್ಟಿಯಿಂದ ಕುಲಕ್ಕೆ ಹಾನಿಯುಂಟಾಗುವ ಸಾಧ್ಯತೆಯಿದೆ. ಆದುದರಿಂದ ಭದ್ರಾಕಾಲದಲ್ಲಿ ರಾಖಿಯನ್ನು ಕಟ್ಟಬಾರದು (ಆಧಾರ : ಧರ್ಮಸಿಂಧು).
- ರಾಖಿಯನ್ನು ಕಟ್ಟಿಸಿಕೊಳ್ಳುವಾಗ ಸಹೋದರನು ಕುಳಿತುಕೊಳ್ಳುವ ಮಣೆಯ ಸುತ್ತಲೂ ಸಾತ್ವಿಕ ರಂಗೋಲಿಯನ್ನು ಬಿಡಿಸಬೇಕು. ಸಾತ್ವಿಕ ರಂಗೋಲಿಯಿಂದ ಸಾತ್ವಿಕ ಸ್ಪಂದನಗಳು ಪ್ರಕ್ಷೇಪಿತವಾಗುತ್ತವೆ. ಅದರಿಂದ ವಾತಾವರಣವು ಸಾತ್ವಿಕವಾಗುತ್ತದೆ.
- ರಾಖಿಯನ್ನು ಕಟ್ಟಿದ ನಂತರ ಸಹೋದರನಿಗೆ ತುಪ್ಪದ ನೀಲಾಂಜನದಿಂದ ಆರತಿಯನ್ನು ಬೆಳಗಿಸುತ್ತಾರೆ. ತುಪ್ಪದ ದೀಪವು ಶಾಂತರೀತಿಯಲ್ಲಿ ಉರಿಯುತ್ತದೆ. ಅದರಿಂದ ಸಹೋದರನಲ್ಲಿ ಶಾಂತ ರೀತಿಯಲ್ಲಿ ವಿಚಾರ ಮಾಡುವ ಬುದ್ಧಿಯು ವೃದ್ಧಿಯಾಗುವಲ್ಲಿ ಸಹಾಯವಾಗುತ್ತದೆ.
- ಆರತಿಯ ತಟ್ಟೆಯಲ್ಲಿ ದುಡ್ಡು ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಇಡಬಾರದು. ಇಂತಹ ವಸ್ತುಗಳನ್ನು ಇಟ್ಟರೆ ಸಹೋದರಿಯ ಮನಸ್ಸಿನಲ್ಲಿ ಆ ದಿಕ್ಕಿನಲ್ಲಿ ಅಪೇಕ್ಷೆ ನಿರ್ಮಾಣವಾಗಿ ಅದೇ ಸಂಸ್ಕಾರ ಪ್ರಬಲವಾಗುತ್ತದೆ. ಇದರಿಂದ ಅವಳಲ್ಲಿ ರಜ ತಮ ಸಂಸ್ಕಾರಗಳ ಪ್ರಮಾಣ ಹೆಚ್ಚಾಗಿ ಅವಳಲ್ಲಿರುವ ಪ್ರೇಮವು ಕಡಿಮೆ ಆಗಿ ಸಹೋದರನ ಜೊತೆ ಕಲಹ ನಿರ್ಮಾಣವಾಗುತ್ತದೆ.
ರಾಖಿ ಕಟ್ಟುವುದರ ಹಿಂದಿರುವ ಉದ್ದೇಶ
ಸಹೋದರ-ಸಹೋದರಿಯರ ನಡುವಿನ ಕೊಡ-ಕೊಳ್ಳುವಿಕೆಯ ಲೆಕ್ಕಾಚಾರ ಕಡಿಮೆ ಮಾಡಲು
ಸಹೋದರ-ಸಹೋದರಿಯರ ನಡುವೆ ಸಾಧಾರಣ 30% ಕೊಡ-ಕೊಳ್ಳುವಿಕೆಯ ಲೆಕ್ಕವಿರುತ್ತದೆ. ರಕ್ಷಾಬಂಧನದಂತಹ ಹಬ್ಬಗಳನ್ನು ಆಚರಿಸುವುದರಿಂದ ಅವರು ಸ್ಥೂಲ ಬಂಧನದಲ್ಲಿ ಸಿಲುಕಿದಂತೆ ಕಂಡರೂ ಸೂಕ್ಷ್ಮ ಸ್ತರದಲ್ಲಿ ಅವರ ನಡುವೆ ಇರುವ ಕೊಡ-ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ.
ಹೊಸ ವರ್ಷಾರಂಭ
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ’. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.
ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ – ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು.
ಐತಿಹಾಸಿಕ ಕಾರಣಗಳು: ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ ‘ಶಾಲಿವಾಹನ ಶಕೆ’ ಪ್ರಾರಂಭವಾಯಿತು, ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ ವಿಜಯವನ್ನು ಪಡೆದನು.
ಆಧ್ಯಾತ್ಮಿಕ ಕಾರಣಗಳು : ಬ್ರಹ್ಮದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದನು. ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ.
ಯಾವುದೇ ಹಬ್ಬ ಬಂದರೆ ಆ ಹಬ್ಬದ ವೈಶಿಷ್ಟ್ಯದಂತೆ ಮತ್ತು ನಮ್ಮ ಪದ್ಧತಿಯಂತೆ ನಾವು ಏನಾದರೂ ಮಾಡುತ್ತಿರುತ್ತೇವೆ, ಆದರೆ ಧರ್ಮದಲ್ಲಿ ಹೇಳಿದಂತಹ ಇಂತಹ ಪಾರಂಪರಿಕ ಕೃತಿಯ ಹಿಂದಿನ ಅಧ್ಯಾತ್ಮಶಾಸ್ತ್ರವನ್ನು ಗಮನದಲ್ಲಿಟ್ಟುಕೊಂಡರೆ ಅದರ ಮಹತ್ವವು ನಮಗೆ ಹಿಡಿಸುತ್ತದೆ. ಇಲ್ಲಿ ನಾವು ಯುಗಾದಿಯಂದು ಮಾಡಬೇಕಾದ ಧಾರ್ಮಿಕ ಕೃತಿಗಳ ಮಾಹಿತಿಯನ್ನು ಪಡೆಯೋಣ.
ಅಭ್ಯಂಗಸ್ನಾನ
ಯುಗಾದಿ ಪಾಡ್ಯದ ದಿನ ಬೆಳಗ್ಗೆ ಬೇಗನೆ ಎದ್ದು ಮೊದಲು ಅಭ್ಯಂಗಸ್ನಾನ ಮಾಡಬೇಕು. ಅಭ್ಯಂಗಸ್ನಾನವನ್ನು ಮಾಡುವಾಗ ‘ದೇಶಕಾಲಕಥನ’ ಮಾಡಬೇಕು.‘ ದೇಶಕಾಲಕಥನ’ ದಿಂದ ಅಹಂ ಕಡಿಮೆಯಾಗಲು ಸಹಾಯವಾಗುತ್ತದೆ.
ತೋರಣವನ್ನು ಕಟ್ಟುವುದು
ಸ್ನಾನದ ಬಳಿಕ ಮಾವಿನ ಎಲೆಯ ತೋರಣವನ್ನು ತಯಾರಿಸಿ ಕೆಂಪು ಹೂವುಗಳೊಂದಿಗೆ ಎಲ್ಲ ಬಾಗಿಲುಗಳಿಗೆ ಕಟ್ಟಬೇಕು. ಏಕೆಂದರೆ ಕೆಂಪು ಬಣ್ಣ ಶುಭಸೂಚಕವಾಗಿದೆ. ಸಾತ್ತ್ವಿಕ ತೋರಣದಿಂದ ಚೈತನ್ಯ ಪ್ರಕ್ಷೇಪಿತವಾಗಿ ಸಂರಕ್ಷಣಾಕವಚ ನಿರ್ಮಾಣವಾಗುತ್ತದೆ.
ಪೂಜೆ
ಮೊದಲು ನಿತ್ಯಕರ್ಮ ದೇವರ ಪೂಜೆಯನ್ನು ಮಾಡಬೇಕು. ‘ವರ್ಷದ ಪಾಡ್ಯದಂದು ಮಹಾಶಾಂತಿ ಮಾಡಬೇಕು. ಶಾಂತಿಯ ಪ್ರಾರಂಭದಲ್ಲಿ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು, ಏಕೆಂದರೆ ಬ್ರಹ್ಮದೇವನು ವಿಶ್ವವನ್ನು ಈ ದಿನವೇ ನಿರ್ಮಿಸಿದನು. ಪೂಜೆಯಲ್ಲಿ ಅವನಿಗೆ ದವನವನ್ನು (ಸುವಾಸನೆಯ ಎಲೆಗಳನ್ನು) ಅರ್ಪಿಸಬೇಕು. ಅನಂತರ ಹೋಮಹವನ ಮತ್ತು ಬ್ರಾಹ್ಮಣಸಂತರ್ಪಣೆ ಮಾಡಬೇಕು. ತರುವಾಯ ಅನಂತ ರೂಪಗಳಲ್ಲಿ ಅವತರಿಸುವ ಶ್ರೀವಿಷ್ಣುವಿನ ಪೂಜೆಯನ್ನು ಮಾಡಬೇಕು. ‘ನಮಸ್ತೆ ಬಹುರೂಪಾಯ ವಿಷ್ಣವೇ ನಮಃ|’ ಎನ್ನುವ ಮಂತ್ರವನ್ನು ಹೇಳಿ ಅವನಿಗೆ ನಮಸ್ಕರಿಸಬೇಕು. ಅನಂತರ ಬ್ರಾಹ್ಮಣರಿಗೆ ದಕ್ಷಿಣೆಯನ್ನು ನೀಡಬೇಕು, ಸಾಧ್ಯವಾದರೆ ಇತಿಹಾಸ, ಪುರಾಣ ಮುಂತಾದ ಗ್ರಂಥಗಳನ್ನು ಬ್ರಾಹ್ಮಣರಿಗೆ ದಾನವೆಂದು ನೀಡಬೇಕು. ಈ ಶಾಂತಿಯನ್ನು ಮಾಡುವುದರಿಂದ ಎಲ್ಲ ಪಾಪಗಳು ನಾಶವಾಗುತ್ತವೆ, ಸಂಕಟಗಳು ಬರುವುದಿಲ್ಲ,ಆಯುಷ್ಯವೃದ್ಧಿಯಾಗುತ್ತದೆ ಮತ್ತು ಧನಧಾನ್ಯಗಳ ಸಮೃದ್ಧಿಯಾಗುತ್ತದೆ.’ ಈ ದಿನ ಯಾವ ವಾರವಿರುತ್ತದೆಯೋ, ಆ ವಾರದೇವತೆಯ ಪೂಜೆಯನ್ನೂ ಮಾಡಬೇಕು.
ಬ್ರಹ್ಮಧ್ವಜವನ್ನು ಏರಿಸುವುದು
ಬಿದಿರಿನ ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ. ಅದರ ಮುಂದೆ ಸುಂದರವಾದ ರಂಗೋಲಿ ಹಾಕುತ್ತಾರೆ. ಇದಕ್ಕೆ ‘ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ ಸಂಕಲ್ಪಪೂರ್ವಕವಾಗಿ ಪೂಜೆ ಮಾಡಬೇಕು. ಎರಡನೆಯ ದಿನದಿಂದ ಈ ಕಲಶವನ್ನು ನೀರು ಕುಡಿಯಲು ಉಪಯೋಗಿಸಬೇಕು, ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು ಕೆಳಗಿಳಿಸುತ್ತಾರೆ.
ಧರ್ಮಧ್ವಜವನ್ನು ನಿಲ್ಲಿಸುವ ಪದ್ಧತಿ
೧. ಧರ್ಮಧ್ವಜದ ಸ್ಥಾನ : ಧರ್ಮಧ್ವಜವನ್ನು ಬಾಗಿಲ ಹೊರಗೆ; ಅದರೆ ಹೊಸ್ತಿಲಿನ ಹತ್ತಿರ (ಮನೆಯೊಳಗಿಂದ ನೋಡಿದರೆ) ಬಲಗಡೆಯಲ್ಲಿ ನಿಲ್ಲಿಸಬೇಕು.
೨. ಪದ್ಧತಿ :
ಅ. ಧರ್ಮಧ್ವಜವನ್ನು ನಿಲ್ಲಿಸುವಾಗ ಎಲ್ಲಕ್ಕಿಂತ ಮೊದಲು ಸೆಗಣಿಯಿಂದ ನೆಲಸಾರಿಸಿ ಅಂಗಳವನ್ನು ರಂಗೋಲಿಯಿಂದ ಸುಶೋಭಿತಗೊಳಿಸಬೇಕು. ಧರ್ಮಧ್ವಜವನ್ನು ನಿಲ್ಲಿಸುವ ಜಾಗದಲ್ಲಿ ರಂಗೋಲಿಯಿಂದ ಸ್ವಸ್ತಿಕವನ್ನು ಬಿಡಿಸಿ ಅದರ ಮಧ್ಯಬಿಂದುವಿನಲ್ಲಿ ಅರಿಷಿಣ ಕುಂಕುಮವನ್ನು ಹಾಕಬೇಕು.
ಆ. ಧರ್ಮಧ್ವಜವನ್ನು ನಿಲ್ಲಿಸುವಾಗ ಬ್ರಹ್ಮಾಂಡದಲ್ಲಿನ ಶಿವ ಶಕ್ತಿಯ ಲಹರಿಗಳ ಆವಾಹನ ಮಾಡಿ ಅವುಗಳನ್ನು ಸ್ವಸ್ತಿಕದ ಮೇಲೆ ಸ್ಥಾಪಿಸಬೇಕು. ಇದರಿಂದ ಧರ್ಮಧ್ವಜದ ತುದಿಯಲ್ಲಿ ಇರುವ ಎಲ್ಲ ಘಟಕಗಳಿಗೆ ದೇವತ್ವವು ಪ್ರಾಪ್ತವಾಗುತ್ತದೆ.
ಇ. ಧರ್ಮಧ್ವಜವನ್ನು ನೆಲದ ಮೇಲೆ ಹೊಸ್ತಿಲಿನ ಹತ್ತಿರ; ಆದರೆ ಸ್ವಲ್ಪ ಬಾಗಿದ ಸ್ಥಿತಿಯಲ್ಲಿ ನಿಲ್ಲಿಸಬೇಕು.
ಪಂಚಾಂಗ ಶ್ರವಣ ಎಂದರೇನು ಮತ್ತು ಅದರ ಮಹತ್ವ ಏನು?
ಜ್ಯೋತಿಷಿಯ ಪೂಜೆಯನ್ನು ಮಾಡಿ ಅವರಿಂದ ಅಥವಾ ಉಪಾಧ್ಯಾಯರಿಂದ ಹೊಸ ವರ್ಷದ ಪಂಚಾಂಗವನ್ನು ಅರ್ಥಾತ್ ವರ್ಷಫಲದ ಶ್ರವಣವನ್ನು ಮಾಡಬೇಕು. ಈ ವರ್ಷಫಲದ ಶ್ರವಣದ ಫಲ ಹೇಳಲಾಗಿದೆ, ಅದು ಮುಂದಿನಂತಿದೆ. ತಿಥಿಯ ಶ್ರವಣದಿಂದ ಲಕ್ಷ್ಮೀಯು ಲಭಿಸುತ್ತಾಳೆ, ವಾರದ ಶ್ರವಣದಿಂದ ಆಯುಷ್ಯವು ವೃದ್ಧಿಯಾಗುತ್ತದೆ, ನಕ್ಷತ್ರಶ್ರವಣದಿಂದ ಪಾಪನಾಶ ವಾಗುತ್ತದೆ, ಯೋಗಶ್ರವಣದಿಂದ ರೋಗಗಳ ನಿವಾರಣೆಯಾಗುತ್ತದೆ, ಕರಣ ಶ್ರವಣದಿಂದ ಇಚ್ಛಿತ ಕಾರ್ಯವು ಸಾಧ್ಯವಾಗುತ್ತದೆ. ಇವು ಪಂಚಾಂಗ ಶ್ರವಣದ ಉತ್ತಮ ಫಲಗಳಾಗಿವೆ. ಇದರ ನಿತ್ಯಶ್ರವಣದಿಂದ ಗಂಗಾಸ್ನಾನದ ಫಲವು ಲಭಿಸುತ್ತದೆ.’
ಬೇವಿನ ಮಿಶ್ರಣ
ಪಂಚಾಂಗಶ್ರವಣದ ನಂತರ ಕಹಿ ಬೇವಿನ ಮಿಶ್ರಣ ಹಂಚಬೇಕು. ಈ ಮಿಶ್ರಣವನ್ನು ಬೇವಿನ ಹೂವು, ಚಿಗುರೆಲೆಗಳು, ಜೇನು, ಜೀರಿಗೆ ಮತ್ತು ಸ್ವಲ್ಪ ಇಂಗು ಇವೆಲ್ಲವನ್ನು ಬೆರೆಸಿ ತಯಾರಿಸುತ್ತಾರೆ.
ಭೂಮಿಯನ್ನು ಉಳುವುದು
ಯುಗಾದಿಯಂದು ಭೂಮಿಯನ್ನು ಊಳಬೇಕು. ಭೂಮಿಯನ್ನು ಉಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. ಮಣ್ಣಿನ ಸೂಕ್ಷ್ಮ-ಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜ ಮೊಳಕೆಯೊಡೆಯುವ ಭೂಮಿಯ ಸಾಮರ್ಥ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ. ಭೂಮಿಗೆ ಉಪಯೋಗಿಸಲ್ಪಡುವ ಸಲಕರಣೆ ಮತ್ತು ಎತ್ತುಗಳ ಮೇಲೆ ಪ್ರಜಾಪತಿ ಲಹರಿಗಳನ್ನು ಉತ್ಪನ್ನ ಮಾಡುವ ಮಂತ್ರಸಹಿತ ಅಕ್ಷತೆಗಳನ್ನು ಹಾಕಬೇಕು. ಹೊಲದಲ್ಲಿ (ಗದ್ದೆಯಲ್ಲಿ) ಕೆಲಸ ಮಾಡುವವರಿಗೆ ಹೊಸ ಬಟ್ಟೆಗಳನ್ನು ಕೊಡಬೇಕು. ಈ ದಿನ ಹೊಲದಲ್ಲಿ ಕೆಲಸ ಮಾಡುವ ಜನರ ಮತ್ತು ಎತ್ತುಗಳ ಭೋಜನದಲ್ಲಿ ಕುಂಬಳಕಾಯಿ, ಹೆಸರುಬೇಳೆ, ಅಕ್ಕಿ, ಹೂರಣ ಮುಂತಾದ ಪದಾರ್ಥಗಳಿರಬೇಕು.
ದಾನ
ಯಾಚಕರಿಗೆ ಅನೇಕ ವಿಧದ ದಾನವನ್ನು ಕೊಡಬೇಕು, ಉದಾ. ಅರವಟ್ಟಿಗೆಯನ್ನು (ಜಲ ಮಂದಿರ) ನಿರ್ಮಿಸಿ ನೀರಿನ ದಾನವನ್ನು ಮಾಡಬೇಕು. ಇದರಿಂದ ಪಿತೃಗಳು ಸಂತುಷ್ಟರಾಗುತ್ತಾರೆ.
ಈ ದಿನ ಅನೇಕ ವಿಧದ ಮಂಗಲ ಹಾಡುಗಳನ್ನು ಮತ್ತು ಪುಣ್ಯಪುರುಷರ ಕಥೆಗಳನ್ನು ಕೇಳುತ್ತಾ ಈ ದಿನವನ್ನು ಆನಂದದಿಂದ ಕಳೆಯಬೇಕು. ಈಗಿನ ಕಾಲದ ಹಬ್ಬವೆಂದರೆ ಮೋಜು ಮಜಾ ಮಾಡುವ ದಿನವೆಂಬ ಸಂಕಲ್ಪನೆ ಬರುವಂತಾಗಿದೆ, ಆದರೆ ಹಿಂದೂ ಧರ್ಮದ ಶಾಸ್ತ್ರೀಯ ಪದ್ಧತಿಯ ಹಬ್ಬವೆಂದರೆ ‘ಹೆಚ್ಚೆಚ್ಚು ಚೈತನ್ಯ ಪಡೆಯುವ ದಿನ’ವಾಗಿರುತ್ತದೆ. ಆದ್ದರಿಂದ ಹಬ್ಬದಂದು ಸಾತ್ತ್ವಿಕ ಆಹಾರ, ಸಾತ್ತ್ವಿಕ ಬಟ್ಟೆ ಹಾಗೂ ಇತರ ಧಾರ್ಮಿಕ ಕೃತಿ ಇತ್ಯಾದಿಗಳನ್ನು ಮಾಡುವುದರೊಂದಿಗೆ ಸಾತ್ತ್ವಿಕವಾದ ಸುಖದಾಯಕ ಕೃತಿಗಳನ್ನು ಮಾಡಲು ಶಾಸ್ತ್ರವು ಹೇಳಿದೆ. ಈ ರೀತಿ ಯುಗಾದಿಯನ್ನು ಆಚರಿಸುವುದರಿಂದ ಆರೋಗ್ಯ, ಕೃಷಿ ಮುಂತಾದವು ಹೆಚ್ಚಾಗುತ್ತದೆ.
ಹನುಮಾನ ಜಯಂತಿಯ ಪೂಜಾವಿಧಿ
ಹನುಮಾನ ಜಯಂತಿಯ ದಿನ (ಚೈತ್ರ ಶುಕ್ಲ ಹುಣ್ಣಿಮೆಯಂದು) ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು (ಹರಿಕಥೆ) ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ (ಜನ್ಮೋತ್ಸವವನ್ನು ಆಚರಿಸಲಾಗುತ್ತದೆ). ನಂತರ ಹನುಮಂತನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಎಲ್ಲರಿಗೂ ಪ್ರಸಾದವನ್ನು ಕೊಡುತ್ತಾರೆ. ನಾವು ಮನೆಯಲ್ಲಿಯೇ ಹನುಮಂತನ ಪೂಜೆಯನ್ನು ಸರಳವಾಗಿ ಹೇಗೆ ಮಾಡಬಹುದು ಎಂದು ತಿಳಿದುಕೊಳ್ಳೋಣ…
1. ಹನುಮಂತನ ಜನನ ಸೂರ್ಯೋದಯದ ಸಮಯದಲ್ಲಿ ಆಚರಿಸಲಾಗುತ್ತದೆ.
2. ಹನುಮಂತನ ವಿಗ್ರಹ ಅಥವಾ ಪ್ರತಿಮೆಯ ಪಂಚೋಪಚಾರ ಅಥವಾ ಷೋಡಶೋಪಚಾರ ಪೂಜೆಯನ್ನು ಮಾಡಬೇಕು.
3. ಸೂರ್ಯೋದಯದ ಸಮಯದಲ್ಲಿ ಶಂಖನಾದ ಮಾಡಿ ಪೂಜೆಯನ್ನು ಪ್ರಾರಂಭಿಸಬೇಕು.
4. ಶುಂಠಿ ಮತ್ತು ಸಕ್ಕರೆಯ ಮಿಶ್ರಣ ನೈವೇದ್ಯವೆಂದು ಇಡಬಹುದು. ಅದರ ನಂತರ ಇದನ್ನು ಎಲ್ಲರೂ ಪ್ರಸಾದ ಎಂದು ಸ್ವೀಕರಿಸಬಹುದು.
5. ಹನುಮಂತನಿಗೆ ಎಕ್ಕದ ಎಲೆ ಹಾಗೂ ಹೂಗಳ ಹಾರವನ್ನು ಅರ್ಪಿಸಬೇಕು.
6. ಪೂಜೆಯ ನಂತರ ಶ್ರೀ ರಾಮನ ಹಾಗೂ ಹನುಮಂತನ ಆರತಿಯನ್ನು ಮಾಡಬೇಕು.
ಪೂಜೆಯ ತಯಾರಿ
1. ಸಾಮಾಗ್ರಿಗಳು
ಅಚಮನಕ್ಕೆ (ಹರಿವಾಣ, ಪಂಚಪಾತ್ರೆ, ಕಲಶ, ಉದ್ಧರಣೆ), ನೀಲಾಂಜನ, ಪೂಜೆಗೆ ತಟ್ಟೆ, ಕಾಲುದೀಪ, ದೀಪದಡಿಯಲ್ಲಿಡಲು ತಟ್ಟೆ, ಘಂಟೆ, ಊದುಬತ್ತಿ
2. ಇತರ ವಸ್ತುಗಳು
ಅಕ್ಷತೆ, ಅರಿಶಿನ-ಕುಂಕುಮ, ಅಡಿಕೆ, ವೀಳ್ಯದೆಲೆಗಳು – 4, ನಾಣ್ಯಗಳು, ಬಿಲ್ವಪತ್ರೆ, ಊದುಬತ್ತಿ ಪೊಟ್ಟಣ, ಹೂಬತ್ತಿ, ಹತ್ತಿಯ ಬತ್ತಿ, ಬೆಂಕಿಪೊಟ್ಟಣ, ಗಂಧ, ತೆಂಗಿನಕಾಯಿ 1, ಎಕ್ಕದ ಎಲೆ ಮತ್ತು ಹೂಗಳ ಹಾರ, ದವನ, ಮಣೆ, ಹಣ್ಣುಗಳು, ಶುಂಠಿಯ ನೈವೇದ್ಯ, ರಂಗೋಲಿ
3. ಪೂಜಕನ ತಯಾರಿ
ಪೂಜಕನ ಮಡಿವಸ್ತ್ರಗಳನ್ನು ಧರಿಸಬೇಕು. ಕೈಗಳನ್ನು ಒರೆಸಿಕೊಳ್ಳಲು ಒಂದು ವಸ್ತ್ರವನ್ನಿಟ್ಟುಕೊಳ್ಳಬಹುದು.
ಪೂಜೆಯ ಸ್ವರೂಪ
ಅಚಮಾನ
ಪೂಜಕನು ದೇವರಿಗೆ ನಮಸ್ಕರಿಸಿ ಮತ್ತು ಪ್ರಾರ್ಥನೆ ಸಲ್ಲಿಸಿ ಪೂಜೆಯನ್ನು ಪ್ರಾರಂಭಿಸಬೇಕು.
ಬಲಗೈಯಿಂದ ಆಚಮನದ ಮುದ್ರೆ ಮಾಡಬೇಕು. ನಂತರ ಎಡಗೈಯಿಂದ ಉದ್ಧರಣೆಯಿಂದ ನೀರನ್ನು ಬಲಗೈಯ ಅಂಗೈಯಲ್ಲಿ (ಮುದ್ರೆಯ ಸ್ಥಿತಿಯಲ್ಲಿಯೇ) ತೆಗೆದುಕೊಳ್ಳಬೇಕು ಮತ್ತು ಶ್ರೀವಿಷ್ಣುವಿನ ಪ್ರತಿಯೊಂದು ಹೆಸರಿನ ಕೊನೆಗೆ ‘ನಮಃ’ ಎಂಬ ಶಬ್ದವನ್ನು ಉಚ್ಚರಿಸಿ ಆ ನೀರನ್ನು ಕುಡಿಯಬೇಕು
೧. ಶ್ರೀ ಕೇಶವಾಯ ನಮಃ | ೨. ಶ್ರೀ ನಾರಾಯಣಾಯ ನಮಃ | ೩. ಶ್ರೀ ಮಾಧವಾಯ ನಮಃ |
ನಾಲ್ಕನೇ ಹೆಸರನ್ನು ಉಚ್ಚರಿಸುವಾಗ ‘ನಮಃ’ ಎಂಬ ಶಬ್ದದ ಸಮಯದಲ್ಲಿ ಬಲಗೈಯಿಂದ ಹರಿವಾಣದಲ್ಲಿ ನೀರನ್ನು ಬಿಡಬೇಕು.
೪. ಶ್ರೀ ಗೋವಿಂದಾಯ ನಮಃ |
ಪೂಜಕನು ಕೈಯನ್ನು ಒರೆಸಿಕೊಂಡು ನಮಸ್ಕಾರದ ಮುದ್ರೆ ಯಲ್ಲಿ ಎದೆಯ ಬಳಿ ಕೈಗಳನ್ನು ಜೋಡಿಸಬೇಕು ಮತ್ತು ಶರಣಾಗತ ಭಾವದಿಂದ ಮುಂದಿನ ಹೆಸರುಗಳನ್ನು ಉಚ್ಚರಿಸಬೇಕು.
೫. ಶ್ರೀ ವಿಷ್ಣವೇ ನಮಃ | ೬. ಶ್ರೀ ಮಧುಸೂದನಾಯ ನಮಃ | ೭. ಶ್ರೀ ತ್ರಿವಿಕ್ರಮಾಯ ನಮಃ | ೮. ಶ್ರೀ ವಾಮನಾಯ ನಮಃ | ೯. ಶ್ರೀ ಶ್ರೀಧರಾಯ ನಮಃ | ೧೦. ಶ್ರೀ ಹೃಷಿಕೇಶಾಯ ನಮಃ | ೧೧. ಶ್ರೀ ಪದ್ಮನಾಭಾಯ ನಮಃ | ೧೨. ಶ್ರೀ ದಾಮೋದರಾಯ ನಮಃ | ೧೩. ಶ್ರೀ ಸಂಕರ್ಷಣಾಯ ನಮಃ | ೧೪. ಶ್ರೀ ವಾಸುದೇವಾಯ ನಮಃ | ೧೫. ಶ್ರೀ ಪ್ರದ್ಯುಮ್ನಾಯ ನಮಃ | ೧೬. ಶ್ರೀ ಅನಿರುದ್ಧಾಯ ನಮಃ | ೧೭. ಶ್ರೀ ಪುರುಷೋತ್ತಮಾಯ ನಮಃ | ೧೮. ಶ್ರೀ ಅಧೋಕ್ಷಜಾಯ ನಮಃ | ೧೯. ಶ್ರೀ ನಾರಸಿಂಹಾಯ ನಮಃ | ೨೦. ಶ್ರೀ ಅಚ್ಯುತಾಯ ನಮಃ | ೨೧. ಶ್ರೀ ಜನಾರ್ದನಾಯ ನಮಃ | ೨೨. ಶ್ರೀ ಉಪೇಂದ್ರಾಯ ನಮಃ | ೨೩. ಶ್ರೀ ಹರಯೇ ನಮಃ | ೨೪. ಶ್ರೀ ಶ್ರೀಕೃಷ್ಣಾಯ ನಮಃ |
ಪುನಃ ಆಚಮನ ಮಾಡಿ ೨೪ ಹೆಸರುಗಳನ್ನು ಹೇಳಬೇಕು. ನಂತರ ಪಂಚಪಾತ್ರೆಯಲ್ಲಿನ ಎಲ್ಲ ನೀರನ್ನು ಹರಿವಾಣದಲ್ಲಿ ಸುರಿಯಬೇಕು ಮತ್ತು ಎರಡೂ ಕೈಗಳನ್ನು ಒರೆಸಿ ಎದೆಯ ಬಳಿ ನಮಸ್ಕಾರದ ಮುದ್ರೆಯಲ್ಲಿ ಕೈಜೋಡಿಸಬೇಕು ಮತ್ತು ಮುಂದೆ ನೀಡಿದಂತೆ ದೇವತೆಗಳನ್ನು ಸ್ಮರಿಸಬೇಕು.
ದೇವತಾಸ್ಮರಣ
ಶ್ರೀಮನ್ಮಹಾಗಣಾಧಿಪತಯೇ ನಮಃ | ಅರ್ಥ: ಗಣಗಳ ನಾಯಕನಾದ ಶ್ರೀ ಗಣಪತಿಗೆ ನಾನು ನಮಸ್ಕರಿಸುತ್ತೇನೆ.
ಇಷ್ಟದೇವತಾಭ್ಯೋ ನಮಃ | ಅರ್ಥ: ನನ್ನ ಆರಾಧ್ಯ ದೇವತೆಗೆ ನಾನು ನಮಸ್ಕರಿಸುತ್ತೇನೆ.
ಕುಲದೇವತಾಭ್ಯೋ ನಮಃ | ಅರ್ಥ: ಕುಲದೇವತೆಗೆ ನಾನು ನಮಸ್ಕರಿಸುತ್ತೇನೆ.
ಗ್ರಾಮದೇವತಾಭ್ಯೋ ನಮಃ | ಅರ್ಥ: ಗ್ರಾಮದೇವತೆಗೆ ನಾನು ನಮಸ್ಕರಿಸುತ್ತೇನೆ.
ಸ್ಥಾನದೇವತಾಭ್ಯೋ ನಮಃ | ಅರ್ಥ: (ಇಲ್ಲಿನ) ಸ್ಥಾನದೇವತೆಗೆ ನಾನು ನಮಸ್ಕರಿಸುತ್ತೇನೆ.
ವಾಸ್ತುದೇವತಾಭ್ಯೋ ನಮಃ | ಅರ್ಥ: (ಇಲ್ಲಿನ) ವಾಸ್ತುದೇವತೆಗೆ ನಾನು ನಮಸ್ಕರಿಸುತ್ತೇನೆ.
ಆದಿತ್ಯಾದಿನವಗ್ರಹದೇವತಾಭ್ಯೋ ನಮಃ | ಅರ್ಥ: ಸೂರ್ಯಾದಿ ಒಂಬತ್ತು ಗ್ರಹದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ.
ಸರ್ವೇಭ್ಯೋ ದೇವೇಭ್ಯೋ ನಮಃ | ಅರ್ಥ: ಎಲ್ಲ ದೇವರಿಗೆ ನಾನು ನಮಸ್ಕರಿಸುತ್ತೇನೆ.
ಸರ್ವೇಭ್ಯೋ ಬ್ರಾಹ್ಮಣೇಭ್ಯೋ ನಮೋ ನಮಃ | ಅರ್ಥ: ಎಲ್ಲ ಬ್ರಾಹ್ಮಣರಿಗೆ (ಬ್ರಹ್ಮನನ್ನು ತಿಳಿದಿರುವವರಿಗೆ) ನಾನು ನಮಸ್ಕರಿಸುತ್ತೇನೆ.
ಅವಿಘ್ನಮಸ್ತು | ಅರ್ಥ: ಎಲ್ಲ ಸಂಕಟಗಳ ನಾಶವಾಗಲಿ.
ದೇಶಕಾಲ
ಪೂಜಕನು ಎರಡೂ ಕಣ್ಣುಗಳಿಗೆ ನೀರು ಹಚ್ಚಿ ನಂತರ ಮುಂದೆ ನೀಡಿದಂತೆ ದೇಶಕಾಲ ಕಥನ ಮಾಡಬೇಕು.
ಶ್ರೀಮದ್ಭಗವತೋ ಮಹಾಪುರುಷಸ್ಯ ವಿಷ್ಣೋರಾಜ್ಞಯಾ ಪ್ರವರ್ತಮಾನಸ್ಯ ಅದ್ಯ ಬ್ರಹ್ಮಣೋ ದ್ವಿತೀಯೇ ಪರಾರ್ಧೇ ವಿಷ್ಣುಪದೇ ಶ್ರೀಶ್ವೇತ-ವಾರಾಹಕಲ್ಪೇ ವೈವಸ್ವತ ಮನ್ವಂತರೇ ಅಷ್ಟಾವಿಂಶತಿ-ತಮೇ ಯುಗೇ ಯುಗಚತುಷ್ಕೇ ಕಲಿಯುಗೇ ಪ್ರಥಮ ಚರಣೇ ಜಂಬುದ್ವೀಪೇ ಭರತವರ್ಷೇ ಭರತಖಂಡೇ ದಕ್ಷಿಣಾಪಥೇ ರಾಮಕ್ಷೇತ್ರೇ ಬೌದ್ಧಾವತಾರೇ ಆರ್ಯಾವರ್ತದೇಶೇ ಅಸ್ಮಿನ್ವರ್ತಮಾನೇ ವ್ಯಾವಹಾರಿಕೇ ಕ್ರೋಧೀ ನಾಮ ಸಂವತ್ಸರೇ, ಉತ್ತರಾಯಣೇ, ವಸಂತಋತೌ, ಚೈತ್ರಮಾಸೇ, ಶುಕ್ಲಪಕ್ಷೇ, ಪೌರ್ಣಿಮಾಯಾಂ ತಿಥೌ, ಮಂಗಲ (ಭೌಮ) ವಾಸರೇ, ಚಿತ್ರಾ ದಿವಸ ನಕ್ಷತ್ರೇ, ವಜ್ರ ಯೋಗೇೇ, ವಿಷ್ಟಿ ಕರಣೇ, ಕನ್ಯಾ ಸ್ಥಿತೇ ವರ್ತಮಾನೇ ಶ್ರೀಚಂದ್ರೇ, ಮೇಷ ಸ್ಥಿತೇ ವರ್ತಮಾನೇ ಶ್ರೀಸೂರ್ಯೇ, ಮೇಷ ಸ್ಥಿತೇ ವರ್ತಮಾನೇ ಶ್ರೀದೇವಗುರೌ, ಕುಂಭ ಸ್ಥಿತೇ ವರ್ತಮಾನೇ ಶ್ರೀಶನೈಶ್ಚರೇ ಶೇಷೇಷು ಸರ್ವಗ್ರಹೇಷು ಯಥಾಯಥಂ ರಾಶಿಸ್ಥಾನಾನಿ ಸ್ಥಿತೇಷು ಏವಂ ಗ್ರಹ ಗುಣವಿಶೇಷೇಣ ವಿಶಿಷ್ಟಾಯಾಂ ಶುಭಪುಣ್ಯತಿಥೌ…
ಯಾರಿಗೆ ಮೇಲಿನ ‘ದೇಶಕಾಲ’ ಹೇಳಲು ಸಾಧ್ಯವಿಲ್ಲವೋ, ಅವರು ಮುಂದಿನ ಶ್ಲೋಕವನ್ನು ಹೇಳಬೇಕು.
ತಿಥಿರ್ವಿಷ್ಣುಸ್ತಥಾ ವಾರೋ ನಕ್ಷತ್ರಂ ವಿಷ್ಣುರೇವ ಚ|
ಯೋಗಶ್ಚ ಕರಣಂ ಚೈವ ಸರ್ವಂ ವಿಷ್ಣುಮಯಂ ಜಗತ್||
ಅರ್ಥ : ತಿಥಿ, ವಾರ, ನಕ್ಷತ್ರ, ಯೋಗ, ಕರಣ ಇತ್ಯಾದಿಗಳನ್ನು ಉಚ್ಚರಿಸುವುದರಿಂದ ಸಿಗುವ ಎಲ್ಲ ಫಲವು ಶ್ರೀವಿಷ್ಣುವಿನ ಸ್ಮರಣೆಯಿಂದ ಪ್ರಾಪ್ತವಾಗುತ್ತದೆ; ಏಕೆಂದರೆ ಇಡೀ ಜಗತ್ತೇ ವಿಷ್ಣುಮಯವಾಗಿದೆ.
ಸಂಕಲ್ಪ
ಬಲಗೈಯಲ್ಲಿ ಅಕ್ಷತೆಯನ್ನು ತೆಗೆದುಕೊಂಡು ಸಂಕಲ್ಪವನ್ನು ಉಚ್ಚರಿಸಬೇಕು.
ಮಮ ಆತ್ಮನಃ ಶ್ರುತಿ-ಸ್ಮೃತಿ-ಪುರಾಣೋಕ್ತ-ಫಲ-ಪ್ರಾಪ್ತ್ಯರ್ಥಂ ಶ್ರೀ ಪರಮೇಶ್ವರಪ್ರೀತ್ಯರ್ಥಮ್ ಅದ್ಯ ದಿನೇ ಅಸ್ಮಾಕಂ ಸಕುಟುಂಬಾನಾಂ ಸಪರಿವಾರಾಣಾಂ ದ್ವಿಪದ-ಚತುಷ್ಪದ-ಸಹಿತಾನಾಂ ಕ್ಷೇಮ-ಸ್ಥೈರ್ಯ-ಆಯುಃ-ಆರೋಗ್ಯ-ಐಶ್ವರ್ಯ-ಅಭಿವೃದ್ಧಿ-ಪೂರ್ವಕಂ ಪ್ರಭು ಶ್ರೀಹನುಮದ್-ದೇವತಾ-ಅಖಂಡ-ಕೃಪಾಪ್ರಸಾದ-ಸಿದ್ಧ್ಯರ್ಥಂ ಗಂಧಾದಿಪಂಚೋಪಚಾರೈಃ ಪೂಜನಮ್ ಅಹಂ ಕರಿಷ್ಯೇ ।। ತತ್ರಾದೌ ನಿರ್ವಿಘ್ನತಾ ಸಿದ್ಧ್ಯರ್ಥಂ ಮಹಾಗಣಪತಿಸ್ಮರಣಂ ಕರಿಷ್ಯೇ ।। ಶರೀರಶುದ್ಧ್ಯರ್ಥಂ ದಶವಾರಂ ವಿಷ್ಣುಸ್ಮರಣಂ ಕರಿಷ್ಯೇ ।। ಕಲಶ-ಘಂಟಾ-ದೀಪ-ಪೂಜನಂ ಕರಿಷ್ಯೇ ।।
‘ಸಂಕಲ್ಪ’ದ ಕುರಿತಾದ ಸೂಚನೆ : ಪ್ರತಿಯೊಂದು ಸಲ ಎಡಗೈಯಿಂದ ಉದ್ಧರಣೆಯಲ್ಲಿ ನೀರನ್ನು ತೆಗೆದುಕೊಂಡು ಅದನ್ನು ಬಲಗೈಯಿಂದ ಕೆಳಗೆ ಬಿಡುವಾಗ ‘ಕರಿಷ್ಯೇ’ ಎಂದು ಹೇಳಬೇಕು.
ಶ್ರೀ ಗಣೇಶ ಸ್ಮರಣೆ
ವಕ್ರತುಣ್ಡ ಮಹಾಕಾಯ ಕೋಟಿಸೂರ್ಯಸಮಪ್ರಭ ।
ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ ।।
ಶ್ರೀ ಗಣೇಶಾಯ ನಮ: ಚಿಂತಯಾಮಿ ।
ಶ್ರೀವಿಷ್ಣು ಸ್ಮರಣೆ
‘ವಿಷ್ಣವೇ ನಮೋ’ ಎಂದು 9 ಬಾರಿ ಹೇಳಿ ಹತ್ತನೇ ಬಾರಿಗೆ ‘ವಿಷ್ಣವೇ ನಮಃ’ ಎಂದು ಹೇಳಿ.
ಕಲಶ ಪೂಜೆ
ಕಲಶದೇವತಾಭ್ಯೋ ನಮಃ | ಸರ್ವೋಪಚಾರಾರ್ಥೇ ಗಂಧಾಕ್ಷತಪುಷ್ಪಂ ಸಮರ್ಪಯಾಮಿ ।।
ಕಲಶದಲ್ಲಿ ಗಂಧ, ಅಕ್ಷತೆ ಮತ್ತು ಹೂವುಗಳನ್ನು ಒಟ್ಟಿಗೆ ಅರ್ಪಿಸಬೇಕು.
ಘಂಟೆಯ ಪೂಜೆ
ಘಂಟಿಕಾಯೈ ನಮಃ | ಸರ್ವೋಪಚಾರಾರ್ಥೇ ಗಂಧಾಕ್ಷತಪುಷ್ಪಂ ಸಮರ್ಪಯಾಮಿ ।
ಘಂಟೆಗೆ ಗಂಧ, ಅಕ್ಷತೆ ಮತ್ತು ಹೂವುಗಳನ್ನು ಒಟ್ಟಿಗೆ ಅರ್ಪಿಸಬೇಕು.
ದೀಪ ಪೂಜೆ
ದೀಪದೇವತಾಭ್ಯೋ ನಮಃ | ಸರ್ವೋಪಚಾರಾರ್ಥೇ ಗಂಧಾಕ್ಷತಪುಷ್ಪಂ ಸಮರ್ಪಯಾಮಿ ||
ದೀಪಕ್ಕೆ ಗಂಧ, ಅಕ್ಷತೆ ಮತ್ತು ಹೂವುಗಳನ್ನು ಅರ್ಪಿಸಬೇಕು. (ದೀಪ ದೇವತೆಗೆ ಅರಿಶಿನ ಕುಂಕುಮ ಅರ್ಪಿಸುವ ಪದ್ಧತಿಯೂ ಇದೆ.)
ಪೂಜಾಸಾಹಿತ್ಯ, ಪೂಜಾಸ್ಥಳ, ಹಾಗೆಯೇ ಸ್ವಂತದ (ಪೂಜಕನ) ಶುದ್ಧಿ
ಕಲಶ ಮತ್ತು ಶಂಖದಲ್ಲಿನ ಸ್ವಲ್ಪ ನೀರನ್ನು ಉದ್ಧರಣೆಯಲ್ಲಿ ಒಟ್ಟಿಗೆ ತೆಗೆದುಕೊಳ್ಳಬೇಕು. ಪೂಜಕನು ಮುಂದಿನ ಮಂತ್ರವನ್ನು ಪಠಿಸುತ್ತಾ ಬಿಲ್ವಪತ್ರಯಿಂದ ಆ ನೀರನ್ನು ಪೂಜಾಸಾಹಿತ್ಯಗಳ ಮೇಲೆ, ತನ್ನ ಸುತ್ತಲೂ (ಪೂಜಾಸ್ಥಳ) ಮತ್ತು ತನ್ನ ಮೇಲೆ (ತಲೆಯ ಮೇಲೆ) ಪ್ರೋಕ್ಷಣೆ ಮಾಡಿಕೊಳ್ಳಬೇಕು.
ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂಗತೋಪಿ ವಾ |
ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭ್ಯಂತರಃ ಶುಚಿಃ ||
ಬಿಲ್ವಪತ್ರೆಯನ್ನು ಹರಿವಾಣದಲ್ಲಿ ಬಿಡಬೇಕು.
ಈಗ ಕೈಮುಗಿದು ಮುಂದಿನ ಶ್ಲೋಕವನ್ನು ಪಠಿಸಬೇಕು.
ಮನೋಜವಂ ಮಾರುತತುಲ್ಯವೇಗಂ ಜಿತೇನ್ದ್ರಿಯಂ ಬುದ್ಧಿಮತಾಂ ವರಿಷ್ಠಮ್ ।
ವಾತಾತ್ಮಜಂ ವಾನರಯೂಥಮುಖ್ಯಂ ಶ್ರೀರಾಮದೂತಂ ಶರಣಂ ಪ್ರಪದ್ಯೇ ।।
ಶ್ರೀ ಹನುಮತೇ ನಮಃ । ಧ್ಯಾಯಾಮಿ ।।
ಶ್ರೀ ಹನುಮತೇ ನಮಃ । ಆವಾಹಯಾಮಿ ।। (ಅಕ್ಷತೆ ಅರ್ಪಿಸಬೇಕು)
ಶ್ರೀ ಹನುಮತೇ ನಮಃ । ವಿಲೇಪನಾರ್ಥೇ ಚಂದನಂ ಸಮರ್ಪಯಾಮಿ ।। (ಗಂಧ ಅರ್ಪಿಸಬೇಕು)
ಶ್ರೀ ಹನುಮತೇ ನಮಃ । ಸಿಂದೂರಂ ಸಮರ್ಪಯಾಮಿ ।। (ಸಿಂದೂರ ಅರ್ಪಿಸಬೇಕು)
ಶ್ರೀ ಹನುಮತೇ ನಮಃ । ಅಲಂಕಾರಾರ್ಥೇ ಅಕ್ಷತಾನ್ ಸಮರ್ಪಯಾಮಿ ।। (ಅಕ್ಷತೆ ಅರ್ಪಿಸಬೇಕು)
ಶ್ರೀ ಹನುಮತೇ ನಮಃ । ಪುಷ್ಪಂ ಸಮರ್ಪಯಾಮಿ ।। (ಹೂವು ಅರ್ಪಿಸಬೇಕು)
ಶ್ರೀ ಹನುಮತೇ ನಮಃ । ಬಿಲ್ವಪತ್ರಂ ಸಮರ್ಪಯಾಮಿ ।। (ಬಿಲ್ವಪತ್ರ ಹಾಗೂ ಎಕ್ಕದ ಎಲೆಗಳನ್ನು ಅರ್ಪಿಸಬೇಕು)
ಶ್ರೀ ಹನುಮತೇ ನಮಃ । ಧೂಪಂ ಸಮರ್ಪಯಾಮಿ ।। (ಊದಬತ್ತಿ ಬೆಳಗಬೇಕು)
ಶ್ರೀ ಹನುಮತೇ ನಮಃ । ದೀಪಂ ಸಮರ್ಪಯಾಮಿ ।। (ದೀಪ ಬೆಳಗಬೇಕು)
ಬಲಗೈಯಲ್ಲಿ ಎರಡು ಬಿಲ್ವಪತ್ರೆಗಳನ್ನು ತೆಗೆದುಕೊಳ್ಳಿ. ಉದ್ಧರಣೆಯಿಂದ ಅದರ ಮೇಲೆ ನೀರು ಬಿಟ್ಟು ನೈವೇದ್ಯದ ಮೇಲೆ ಪ್ರೋಕ್ಷಣೆ ಮಾಡಿ (ಸಿಂಪಡಿಸಿ) ಒಂದು ಎಲೆಯನ್ನು ಅದರ ಮೇಲಿಡಬೇಕು. ಇನ್ನೊಂದು ಎಲೆಯನ್ನು ಕೈಯಲ್ಲಿಯೇ ಹಿಡಿದುಕೊಂಡಿರಬೇಕು ಮತ್ತು ಎಡಗೈಯ ಬೆರಳುಗಳನ್ನು ಎರಡೂ ಕಣ್ಣುಗಳ (ಅಪವಾದ: ಎಡಗೈಯನ್ನು ಎದೆಯ ಮೇಲೆ) ಮೇಲಿಟ್ಟು ನೈವೇದ್ಯವನ್ನು ಅರ್ಪಿಸುವಾಗ ಮುಂದಿನ ಮಂತ್ರಗಳನ್ನು ಪಠಿಸಬೇಕು.
ಶ್ರೀ ಹನುಮತೇ ನಮಃ । ಶುಂಠಿಕಾ ನೈವೇದ್ಯಂ ನಿವೇದಯಾಮಿ ।
ಓಂ ಪ್ರಾಣಾಯ ಸ್ವಾಹಾ । ಓಂ ಅಪಾನಾಯ ಸ್ವಾಹಾ । ಓಂ ವ್ಯಾನಾಯ ಸ್ವಾಹಾ ।
ಓಂ ಉದಾನಾಯ ಸ್ವಾಹಾ । ಓಂ ಸಮಾನಾಯ ಸ್ವಾಹಾ । ಓಂ ಬ್ರಹ್ಮಣೇ ಸ್ವಾಹಾ ।
ಮಂತ್ರಗಳನ್ನು ಹೇಳಿ ಎಲೆಯನ್ನು ಹನುಮಂತನಿಗೆ ಅರ್ಪಿಸಬೇಕು. ಮುಂದಿನ ಮಂತ್ರಗಳು ಹೇಳುವಾಗ ಕ್ರಮವಾಗಿ ಎಲೆಯಡಿಕೆ, ತೆಂಗಿನಕಾಯಿ ಮತ್ತು ಹಣ್ಣುಗಳ ಮೇಲೆ ನೀರನ್ನು ಸಿಂಪಡಿಸಬೇಕು.
ಶ್ರೀ ಹನುಮತೇ ನಮಃ । ಮುಖವಾಸಾರ್ಥೇ ಪೂಗೀಫಲತಾಂಬೂಲಂ ಸಮಪರ್ಯಾಮಿ । ಫಲಾರ್ಥೇ ನಾರಿಕೇಲಫಲಂ ಸಮಪರ್ಯಾಮಿ ।
ಪ್ರಾರ್ಥನೆ
ಆವಾಹನಂ ನ ಜಾನಾಮಿ ನ ಜಾನಾಮಿ ತವಾರ್ಚನಮ್ । ಪೂಜಾಂ ಚೈವ ನ ಜಾನಾಮಿ ಕ್ಷಮ್ಯತಾಂ ಪರಮೇಶ್ವರ ।।
ಮಂತ್ರಹೀನಂ ಕ್ರಿಯಾಹೀನಂ ಭಕ್ತಿಹೀನಂ ಸುರೇಶ್ವರ । ಯತ್ಪೂಜಿತಂ ಮಯಾ ದೇವ ಪರಿಪೂರ್ಣಂ ತದಸ್ತು ಮೇ ।
ಯಸ್ಯ ಸ್ಮೃತ್ಯಾ ಚ ನಾಮೋಕ್ತ್ಯಾ ತಪಃಪೂಜಾಕ್ರಿಯಾದಿಷು । ನ್ಯೂನಂ ಸಂಪೂರ್ಣತಾಂ ಯಾತಿ ಸದ್ಯೋ ವಂದೇ ತಮಚ್ಯುತಮ್ ।।
ಬಲಗೈಯಲ್ಲಿ ಅಕ್ಷತೆ ತೆಗೆದುಕೊಂಡು ಮುಂದಿನ ಮಂತ್ರವನ್ನು ಪಠಿಸಬೇಕು ಮತ್ತು ಪ್ರಿಯತಾಂ ಎಂದು ಹೇಳುವಾಗ, ಉದ್ಧರಣೆಯಿಂದ ಬಲಗೈಯಲ್ಲಿ ನೀರು ತೆಗೆದುಕೊಂಡು ಹರಿವಾಣದಲ್ಲಿ ಅಕ್ಷತೆಯನ್ನು ಬಿಡಬೇಕು.
ಅನೇನ ಕೃತ ಪೂಜನೇನ ಶ್ರೀ ಹನುಮತ್ ದೇವತಾ ಪ್ರೀಯತಾಮ್ ।।
ನಂತರ, ಪ್ರಾರಂಭದಲ್ಲಿ ಹೇಳಿದಂತೆ, ಅಚಮನ ಮಾಡಿ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕು.